ಚಿಕ್ಕಮಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಇಂದು ಶೃಂಗೇರಿಗೆ ಆಗಮಿಸಿದ್ದು, ಈ ವೇಳೆ ಕಾರ್ಯಕರ್ತರು ಮುಂದಿನ ಸಿಎಂ ಘೋಷಣೆ ಕೂಗಿದ್ದಾರೆ.
ಮೆಣಸೆಯ ಹೆಲಿಪ್ಯಾಡ್ ಗೆ ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ಶಾಸಕ ಟಿಡಿ ರಾಜೇಗೌಡ ಸ್ವಾಗತ ಕೋರಿದರು. ಈ ವೇಳೆ ಕಾರ್ಯಕರ್ತರು ಮುಂದಿನ ಸಿಎಂ ಘೋಷಣೆ ಕೂಗಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಟೆಂಪಲ್ ರನ್ ಮುಂದುವರೆದಿದ್ದು, ಇಂದು ಶೃಂಗೇರಿಗೆ ಭೇಟಿ ನೀಡಿದ್ದಾರೆ.
ಶೃಂಗೇರಿ ಶ್ರೀಶಾರದಾ ಪೀಠದಲ್ಲಿ ಜಗದ್ಗುರು ಶ್ರೀಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳ ಸನ್ಯಾಸ ಸ್ವೀಕರಿಸಿ 50 ವರ್ಷ ಪೂರೈಸಿದ ಸ್ವರ್ಣ ಸಂಭ್ರಮದ ಹಿನ್ನೆಲೆಯಲ್ಲಿ “ಸ್ತೋತ್ರ ತ್ರಿವೇಣಿಯ ಮಹಾ ಸಮರ್ಪಣೆ” ಎಂಬ ಐತಿಹಾಸಿಕ ಸ್ತೋತ್ರ ಪಠಣ ಕಾರ್ಯಕ್ರಮವು ಇಂದು ನೆರವೇರುತ್ತಿದೆ. ನರಸಿಂಹವನದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದ್ದು, 50,000 ಕ್ಕೂ ಅಧಿಕ ಜನ ಭಕ್ತರು ಸ್ತೋತ್ರ ಪಠಣೆಯಲ್ಲಿ ಭಾಗಿಯಾಗಿದ್ದಾರೆ.