alex Certify Karnataka Weather Update : ರಾಜ್ಯದಲ್ಲಿ ಮುಂದಿನ 5 ದಿನ ವಿಪರೀತ ಚಳಿ, ಶೀತಗಾಳಿ : ಹವಾಮಾನ ಇಲಾಖೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Karnataka Weather Update : ರಾಜ್ಯದಲ್ಲಿ ಮುಂದಿನ 5 ದಿನ ವಿಪರೀತ ಚಳಿ, ಶೀತಗಾಳಿ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಮೈ ಕೊರೆಯುವ ಚಳಿಯಿದ್ದು, 5 ದಿನ ವಿಪರೀತ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯಾದ್ಯಂತ ಚಳಿ ವಾತಾವರಣ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ ಸೇರಿದಂತೆ ದಕ್ಷಿಣ ವಲಯದಲ್ಲಿ ಚಳಿ ಹೆಚ್ಚಿರಲಿದೆ. ತಾಪಮಾನ 2 ರಿಂದ 4ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನ ನೀಡಿದೆ.

ದೆಹಲಿಯಲ್ಲಿ ಚಳಿ ಪ್ರಮಾಣ ಹೆಚ್ಚಾಗಿದೆ. ಹವಾಮಾನ ಇಲಾಖೆ ವರದಿ ಪ್ರಕಾರ ಇನ್ನು ಎರಡು ವಾರಗಳ ಕಾಲ 16 ರಾಜ್ಯಗಳಲ್ಲಿ ತಾಪಮಾನ ಇಳಿಕೆಯಾಗಲಿದೆಉ. ತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ಧಾರವಾಡ, ಯಾದಗಿರಿ, ಕೊಪ್ಪಳ, ಗದಗ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 12ರಿಂದ 13 ಡಿಗ್ರಿ ಸೆಲ್ಸಿಯಸ್ ನಷ್ಟು ದಾಖಲಾಗುತ್ತಿದ್ದು, ಜನವರಿ 25ರ ವರೆಗೂ ಈ ತಾಪಮಾನ ಮುಂದುವರಿಯುತ್ತದೆ.

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...