ಬೆಂಗಳೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಸಂಭವಿಸುತ್ತಿದ್ದರೂ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಕನ್ನಡಿಗರ ಹಿತ ಮರೆತು ಅಧಿಕಾರದ ಗದ್ದುಗೆಗಾಗಿ ಡಿನ್ನರ್, ಮಿಡ್ನೈಟ್ ಮೀಟಿಂಗ್ ನಲ್ಲಿ ಮುಳುಗಿದ್ದಾರೆ ಕಾಂಗ್ರೆಸ್ ನಾಯಕರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಳಿ ನಡೆಸಿದೆ.
ರಾಜ್ಯದ ಜನತೆ ಕಾಂಗ್ರೆಸ್ಗೆ ಸ್ಪಷ್ಟ ಬಹುಮತ ನೀಡಿದ್ದರೂ ಅಧಿಕಾರ ಹಂಚಿಕೆ ಕುರಿತು ಚರ್ಚೆ ಮುಖ್ಯವಾಗಿದೆಯೇ ಹೊರತು ಅಭಿವೃದ್ಧಿ ವಿಚಾರ ಪ್ರಮುಖವಾಗಿಲ್ಲ, ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳನ್ನು ನೋಡಲು ಸಾಧ್ಯವಾಗದ ಸ್ಥಿತಿಯಿದೆ. ಭ್ರಷ್ಟ ಸರ್ಕಾರದ ನಿರ್ಲಕ್ಷ್ಯ ನಡೆಗೆ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.