ಬೆಂಗಳೂರು : ಜನವರಿ ಜ.13 ರಂದು (ಸೋಮವಾರ) ಬೆಳಿಗ್ಗೆಯಿಂದ ಸಂಜೆಯವರೆಗೆ ಉದ್ಯಾನ ನಗರಿಯ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಡೆಸುತ್ತಿರುವ ತುರ್ತು ನಿರ್ವಹಣಾ ಕಾರ್ಯದಿಂದಾಗಿ ವಿದ್ಯುತ್ ವ್ಯತ್ಯಯ ಉಂಟಾಗಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಪ್ರಕಟಿಸಿದೆ.
ಸೋಮವಾರ ಎಲ್ಲೆಲ್ಲಿ ಪವರ್ ಕಟ್?
ಕಾವೇರಿನಗರ, ಹುಳಿಮಾವು, ಅಕ್ಷಯ ನಗರ, ಹೊಂಗಸಂದ್ರ, ಬಿ.ಟಿ.ಎಸ್ ಲೇಔಟ್, ಕೋಡಿಚಿಕ್ಕನಹಳ್ಲಿ, ವಿಜಯಬ್ಯಾಂಕ್ ಲೇಔಟ್, ವಿಶ್ವಪ್ರಿಯಾ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಮಲ್ಲೇಶ್ವರಂ, ಎಂ.ಡಿ.ಬ್ಲಾಕ್, ವೈಯಾಲಿಕಾವಲ್, ಈಜುಕೊಳ ವಿಸ್ತರಣೆ, ಕೋದಂಡರಾಮಪುರ, ದಿವಾನರ ಪಾಳ್ಯ, ಕೆ.ಎನ್. ವಿಸ್ತರಣೆ, ಯಶವಂತಪುರ 1ನೇ ಮುಖ್ಯರಸ್ತೆ, ಎಚ್.ಎಂ.ಟಿ. ಮುಖ್ಯ ರಸ್ತೆ, ಮಾಡೆಲ್ ಕಾಲೋನಿ, ರಂಗನಾಥಪುರ, ಬಿಎಚ್ಇಎಲ್, ಐಐಎಸ್ಸಿ ಬ್ರೈನ್ ಸೆಂಟರ್, ಅಂಬೇಡ್ಕರ್ ನಗರ, ಯಶವಂತಪುರ, ಪೈಪ್ಲೈನ್ ರಸ್ತೆ, ಎಲ್ಎನ್ ಕಾಲೋನಿ, ಸುಬೇದ್ರಪಾಳ್ಯ,ಶರೀಫ್ ನಗರ ಸೇರಿ ಹಲವು ಕಡೆ ಪವರ್ ಕಟ್ ಇರಲಿದೆ.
ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯದ ವಿವರ
ಜನವರಿ 12, 13 ಮತ್ತು 15, 16, 2025#Bescom #Poweroutage pic.twitter.com/VgcgjPuCgH
— Namma BESCOM | ನಮ್ಮ ಬೆಸ್ಕಾಂ (@NammaBESCOM) January 11, 2025