ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಜನತೆ ಬೆಚ್ಚಿ ಬಿದ್ದಿದ್ದಾರೆ. ಬೆಂಗಳೂರಿನ ಬನಶಂಕರಿಯ 6ನೇ ಹಂತದಲ್ಲಿ ಚಿರತೆ ಹಾಗೂ ಮರಿ ಚಿರತೆಗಳು ಪ್ರತ್ಯಕ್ಷವಾಗಿವೆ.
ಬನಶಂಕರಿ 6ನೇ ಹಂತದ 1ನೇ ಬಡಾವಣೆಯ ಸುತ್ತಮುತ್ತ ಚಿರತಗೆಳು ಓಡಾಡಿರುವ ದೃಶ್ಯ ಸಿಸಿಟಿವಿ ಕ್ಯಾಮರಾ ಹಾಗೂ ಕೆಲವರ ಮೊಬೈಲ್ ಕ್ಯಾಮರಾಗಳಲ್ಲಿ ಸೆರೆಯಾಗಿವೆ. ಇದರಿಂದಾಗಿ ಸ್ಥಳೀಯ ನಿವಾಸಿಗಳು ಆತಂಕಕ್ಕೀಡಾಗಿದ್ದಾರೆ.
ಜನರು ಮನೆಯಿಂದ ಹೊರಬರಲು ಭಯಪಡುತ್ತಿದ್ದು, ಮಕ್ಕಳನ್ನು ಶಾಲೆಗಳಿಗೆ ಕಳುಹಿಸಲು ಆತಂಕಪಡುತ್ತಿರುವ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಫುಡ್ ಡಿಲೆವರಿ ಬಾಯ್ಸ್ ಕೂಡ ಆರ್ಡರ್ಸ್ ತಂದುಕೊಡಲು ಹಿಂದೇಟು ಹಾಕುತ್ತಿದ್ದಾರೆ. ಚಿರತೆ ಹಾಗೂ ಚಿರತೆ ಮರಿಯನ್ನು ತಕ್ಷಣ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಜನರು ಒತ್ತಾಯಿಸಿದ್ದಾರೆ.