ತುಮಕೂರು: ಚಿರತೆಯ ಬಾಲ ಹಿಡಿದು ಎಲ್ಲರನ್ನು ಅಚ್ಚರಿಗೊಳಿಸಿದ್ದ ಆನಂದ್ ಗೆ ಆಘಾತ ಎದುರಾಗಿದೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರ 13 ವರ್ಷದ ಮಗಳು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ.
ಆನಂದ್ ಅವರ ಮಗಳು ಕವನ (13) ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಈ ಘಟನೆ ನಡೆದಿದೆ.
ರಂಗಾಪುರದ ಚಿಕ್ಕಕೊಟ್ತಿಗೇನಹಳ್ಳಿಯ ನಿವಾಸಿ ಆನಂದ್ ವಾರದ ಹಿಂದಷ್ಟೇ ಅರಣ್ಯ ಇಲಾಖೆ ಸಿಬ್ಬಂದಿಯಿಂದ ತಪ್ಪಿಸಿಕೊಂಡಿದ್ದ ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆನಂದ್ ಅವರ ಧೈರ್ಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿತ್ತು. ಅವರ ಮಗಳು ಕವನಾಗೆ ಇದ್ದಕ್ಕಿದ್ದಂತೆ ಇಂದು ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ತಿಪಟೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕವನಾ ಸಾವನ್ನಪ್ಪಿದ್ದಾರೆ.