ಮಂಗಳೂರು: ಪಿಸ್ತಾ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಮೃತಪಟ್ಟ ಘಟನೆ ಕಾಸರಗೋಡಿನ ಕುಂಬಳೆಯಲ್ಲಿ ನಡೆದಿದೆ.
ಮೃತ ಬಾಲಕನನ್ನು ಕುಂಬಳೆ ಭಾಸ್ಕರ ನಗರದ ಅನ್ವರ್ ಮೆಹರೂಫಾ ದಂಪತಿ ಪುತ್ರ ಅನಾಸ್ ಎಂದು ಗುರುತಿಸಲಾಗಿದೆ.
ಬಾಲಕ ಪಿಸ್ತಾವನ್ನು ತಿನ್ನುತ್ತಿದ್ದಾಗ ಸಿಪ್ಪೆ ಗಂಟಲಲ್ಲಿ ಸಿಲುಕಿದ್ದು, ಪೋಷಕರು ಸಿಪ್ಪೆಯ ಒಂದು ತುಂಡನ್ನು ಹೊರತೆಗೆದಿದ್ದಾರೆ. ನಂತರ ಬಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ವೈದ್ಯರು ತಪಾಸಣೆ ನಡೆಸಿ ಗಂಟಲಲ್ಲಿ ಯಾವುದೇ ವಸ್ತುಗಳು ಸಿಲುಕಿಲ್ಲ ಎಂದು ಹೇಳಿದ್ದು, ಪೋಷಕರು ಮನೆಗೆ ಕರೆದುಕೊಂಡು ಬಂದಿದ್ದಾರೆ.
ಬೆಳಿಗ್ಗೆ ಮತ್ತೆ ಬಾಲಕನಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರೂ ಬಾಲಕ ಬದುಕಲಿಲ್ಲ.