ಕಲಬುರಗಿ : ಪ್ರೀತಿಸುವಂತೆ ಪಾಗಲ್ ಪ್ರೇಮಿ ಕಿರುಕುಳ ನೀಡಿದ್ದು, ಮನನೊಂದು ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜೇವರ್ಗಿ ತಾಲೂಕಿನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
8 ನೇ ತರಗತಿ ಓದುತ್ತಿದ್ದ 14 ವರ್ಷದ ಬಾಲಕಿಗೆ ಆಟೋ ಚಾಲಕ ಮೆಹಬೂಬ್ ಎಂಬಾತ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದನು ಎನ್ನಲಾಗಿದೆ. ಆತನ ಕಿರುಕುಳ ತಾಳಲಾರದೇ ನೇಣು ಬಿಗಿದುಕೊಂಡು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಘಟನೆ ಹಿನ್ನೆಲೆ ಜನರು ಟೈರ್ ಗೆ ಬೆಂಕಿ ಹಚ್ಚಿ ಜೇವರ್ಗಿಯಲ್ಲಿ ಪ್ರತಿಭಟನೆ ನಡೆಸಿದ್ದು, ಆರೋಪಿಯನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಈ ಸಂಬಂಧ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.