ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ದಾರುಣ ಘಟನೆಯೊಂದು ನಡೆದಿದೆ. ಮೈಕೊರೆವ ಚಳಿ, ಶೀತಗಾಳಿಯಿಂದಾಗಿ ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ನಾಗೇಶ್ ಮೃತ ದುರ್ದೈವಿ. ಮೈಸೂರಿನ ಚಲುವಾಂಬಾ ಆಸ್ಪತ್ರೆ ಆವರಣದಲ್ಲಿ ಘಟನೆ ನಡೆದಿದೆ. ನಾಗೇಶ್ ಪತ್ನಿ ಹೆರಿಗೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯ ಒಳಗೆ ಪತ್ನಿ ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ ಆಸ್ಪತ್ರೆಯ ಹೊರಗೆ ಪತಿ ನಾಗೇಶ್ ಚಳಿಯಿಂದ ಮಲಗಿದ್ದಲ್ಲಿಯೇ ಮೃತಪಟ್ಟಿದ್ದಾರೆ.
ಶೀತಗಾಳಿ ಹೊಡೆತ, ಮೈ ಕೊರೆವ ಚಳಿಯಿಂದಾಗಿ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.