ಶಿವಮೊಗ್ಗ : ಕೆಲವು ವ್ಯಕ್ತಿಗಳು ಸೂಡಾ ನಿವೇಶನ ಮಂಜೂರು ಮಾಡಿಕೊಡುವುದಾಗಿ ಹಣದ ಬೇಡಿಕೆ ಇಡುತ್ತಿದ್ದು ಇಂತಹ ಯಾವುದೇ ಆಮಿಷಕ್ಕೆ ಸಾರ್ವಜನಿಕರು ಒಳಗಾಗದೇ ಇರುವಂತೆ ಸೂಡಾ ತಿಳಿಸಿದೆ.
ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದಿಂದ ಊರಗಡೂರು ವಸತಿ ಬಡಾವಣೆಯಲ್ಲಿ ನಿವೇಶನ ಹಂಚಿಕೆ ಕುರಿತು ಪ್ರಕಟಣೆ ಹೊರಡಿಸಿ 2024 ರ ಡಿ.05 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು.
ಅರ್ಜಿ ಸಲ್ಲಿಸುವ ಅವಧಿ ಈಗಾಗಲೇ ಮುಗಿದಿರುತ್ತದೆ. ನಿವೇಶನ ಹಂಚಿಕೆ ಕೋರಿ ಸಲ್ಲಿಸಿರುವ ಅರ್ಜಿಗಳನ್ನು ಪ್ರಾಧಿಕಾರದಿಂದ ಕರ್ನಾಟಕ ನಗರಾಭಿವೃದ್ದಿ ಪ್ರಾಧಿಕಾರಗಳ ನಿವೇಶನ ಹಂಚಿಕೆ ನಿಯಮದಂತೆ ಪರಿಶೀಲಿಸಲು ಕ್ರಮ ವಹಿಸಲಾಗುವುದು.
ಆದರೆ ಕೆಲವು ವ್ಯಕ್ತಿಗಳು ಸಾರ್ವಜನಿಕರಿಗೆ ನಿವೇಶನಗಳನ್ನು ಮಂಜೂರಾತಿ ಮಾಡಿಕೊಡುವುದಾಗಿ ಹಣದ ಬೇಡಿಕೆ ಇಡುತ್ತಿರುವುದು ಪ್ರಾಧಿಕಾರದ ಗಮನಕ್ಕೆ ಬಂದಿರುತ್ತದೆ. ಇಂತಹ ಹಣ/ಯಾವುದೇ ಆಮಿಷಗಳಿಗೆ ಒಳಗಾಗದೇ ಇರಲು ಪ್ರಾಧಿಕಾರ ತಿಳಿಸಿದೆ. ಒಂದು ವೇಳೆ ಇಂತಹ ಯಾವುದೇ ಆಮಿಷಗಳಿಗೆ ತಾವು ಒಳಗಾದಲ್ಲಿ ಈ ಪ್ರಾಧಿಕಾರವು ಜವಾಬ್ದಾರಿಯಾಗಿರುವುದಿಲ್ಲವೆಂದು ಈ ಮೂಲಕ ತಿಳಿಸಲಾಗಿದೆ ಎಂದು ಸೂಡಾ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ಮತ್ತು ಆಯುಕ್ತರಾದ ವಿಶ್ವನಾಥ ಮುದಜ್ಜಿ ತಿಳಿಸಿದ್ದಾರೆ.