alex Certify BIG NEWS: ಗುತ್ತಿಗೆದಾರರ ಸಂಘದಿಂದ 7 ಸಚಿವರಿಗೆ ಪತ್ರ: ಬಾಕಿ ಬಿಲ್ ಪಾವತಿಸದಿದ್ದರೆ ಹೋರಾಟದ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗುತ್ತಿಗೆದಾರರ ಸಂಘದಿಂದ 7 ಸಚಿವರಿಗೆ ಪತ್ರ: ಬಾಕಿ ಬಿಲ್ ಪಾವತಿಸದಿದ್ದರೆ ಹೋರಾಟದ ಎಚ್ಚರಿಕೆ

ಬೆಂಗಳೂರು: ರಾಜ್ಯ ಗುತ್ತಿಗೆದಾರರ ಸಂಘ 7 ಸಚಿವರಿಗೆ ಪತ್ರ ಬರೆದಿದ್ದು, ಗುತ್ತಿಗೆದಾರರ ಬಾಕಿ ಬಿಲ್ ಪಾವತಿ ಮಾಡದಿದ್ದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಕರ್ನಾಟಕ ಕಾಂಟ್ರ್ಯಾಕ್ಟರ್ಸ್ ಅಸೋಸಿಯೇಷನ್, 7 ಸಚಿವರಿಗೆ ಪತ್ರ ಬರೆದಿದೆ. ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಹೆಚ್.ಸಿ.ಮಹದೇವಪ್ಪ, ಜಮೀರ್ ಅಹ್ಮದ್, ಬೋಸರಾಜು, ದಿನೇಶ್ ಗುಂಡೂರಾವ್, ರಹೀಂ ಖಾನ್ ಅವರಿಗೆ ಪತ್ರ ಬರೆಯಲಾಗಿದೆ.

ಗುತ್ತಿಗೆದಾರರ ಕುಂದು-ಕೊರತೆಗಳ ಬಗ್ಗೆ ಚರ್ಚೆ ನಡೆಸಲು ಹಾಗೂ ಬಿ ಪಾವತಿ ಬಗ್ಗೆ ಮಾತುಕತೆ ನಡೆಸಲು ಸಭೆ ಕರೆದು ಅಧಿಕಾರಿಗಳ ಜೊತೆ ಚರ್ಚಿಸಲು ಅವಕಾಶ ನೀಡಿ. ಈಗಗಲೇ ಹಲವು ಬಾರಿ ಬಾಕಿ ಬಿಲ್ ಪಾವತಿ ಮಡುವಂತೆ ಮನವಿ ಮಾಡಿದರೂ ಈ ಬಗ್ಗೆ ಗಮನ ಹರಿಸಿಲ್ಲ. ಹಾಗಾಗಿ ಸಭೆ ನಡೆಸಿ ಚರ್ಚಿಸಲು ಅವಕಾಶ ಕೊಡುವಂತೆ ಪತ್ರದಲ್ಲಿ ಮನವಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...