ನೌಕಾನೆಲೆ ಸಿಬ್ಬಂದಿಯಿಂದ ಅಯ್ಯಪ್ಪ ಮಾಲಾಧಾರಿಗಳ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ಅಯ್ಯಪ್ಪ ಮಾಲಾಧಾರಿಗಳು ಸ್ಥಳದಲ್ಲೇ ಬೀಡುಬಿಟ್ಟು ಪ್ರತಿಭಟನೆ ನಡೆಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.
ನಿನ್ನೆ ರಾತ್ರಿ 25ಕ್ಕೂ ಹೆಚ್ಚು ನೌಕಾನೆಲೆ ಸಿಬ್ಬಂದಿಗಳು ಅಯ್ಯಪ್ಪ ಮಾಲಾಧಾರಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ನೌಕರರು ಕೆಲಸಕ್ಕೆ ಹೋಗದಂತೆ ಗೇಟ್ ಬಳಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಕಾಲೋನಿ ಗೇಟ್ ಬಳಿ ಜಮಾವಣೆಗೊಂಡಿರುವ ಸಾರ್ವಜನಿಕರು ಹಲ್ಲೆಕೋರರನ್ನು ಬಂಧಿಸುವವರೆಗೂ ನಾವು ಪ್ರತಿಭಟನೆ ಹಿಂಪಡೆಯಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಪ್ರತಿಭಟನಾಕಾರರಿಗೆ ಮಾಜಿ ಶಾಸಕ ರೂಪಾಲಿ ನಾಯ್ಕ್ ಬೆಂಬಲ ನೀಡಿದ್ದಾರೆ. ಕಾಂಗ್ರೆಸ್ ಮುಖಂಡ ಶಂಭು ಶೆಟ್ಟಿ ಸೇರಿದಂತೆ ಇತ್ತರರು ಪ್ರತಿಭಟನೆಗೆ ಸಾಥ್ ನೀಡಿದ್ದಾರೆ. 4 ಡಿಎಆರ್ ತುಕಡಿ ಸೇರಿದಂತೆ ನೂರಾರು ಪೊಲೀಸರು ಹಾಗೂ ಹಿರಿಯ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.