ತಿರುಪತಿ: ತಿರುಪತಿ ತಿರುಮಲದಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ಲಡ್ಡು ವಿತರಣಾ ಕೌಂಟರ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಲಡ್ಡು ವಿತರಣಾ ಕೌಂಟರ್ 47ರಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಟಿಟಿಡಿ ಸಿಬ್ಬಂದಿಗಳು ತಕ್ಷಣ ಬೆಂಕಿ ನಂದಿಸಿದ್ದು, ಭಾರಿ ಅನಾಹುತ ತಪ್ಪಿದೆ.
ಬೆಂಕಿ ಅವಘಡದಿಂದಾಗಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಇತ್ತೀಚೆಗಷ್ಟೇ ತಿರುಪತಿಯಲ್ಲಿ ಕಾಲ್ತುಳಿತ ಸಂಭವಿಸಿ 6 ಭಕ್ತರು ಸಾವನ್ನಪ್ಪಿದ್ದರು. ಹಲವರು ಗಾಯಗೊಂಡಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ಲಡ್ಡು ಕೌಂಟರ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ.