alex Certify BIG NEWS: ಏಕಾಏಕಿ ತುಂಡಾಗಿ ಕಳಚಿ ಬಿದ್ದ ಚಲಿಸುತ್ತಿದ್ದ KSRTC ಬಸ್ ಚಕ್ರಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಏಕಾಏಕಿ ತುಂಡಾಗಿ ಕಳಚಿ ಬಿದ್ದ ಚಲಿಸುತ್ತಿದ್ದ KSRTC ಬಸ್ ಚಕ್ರಗಳು

ಹಾಸನ: ಚಲಿಸುತ್ತಿದ್ದ ಸರ್ಕಾರಿ ಬಸ್ ನ ಚಕ್ರಗಳು ಏಕಾಏಕಿ ತುಂದಾಗಿ ಬಿದ್ದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ.

ಕೆ.ಎಸ್.ಆರ್.ಟಿ.ಸಿ ಬಸ್ ಸಕಲೇಶಪುರದಿಂದ ಬೇಲೂರಿಗೆ ತೆರಳುತ್ತಿತ್ತು. ಈ ವೇಳೆ ಬಸ್ ನ ಚಕ್ರಗಳು ಏಕಾಏಕಿ ತುಂಡಾಗಿ ಕಳಚಿ ಬಿದ್ದಿವೆ. ಚಕ್ರಗಳು ಕಳಚುತ್ತಿದ್ದಂತೆ ಬಸ್ ಚಾಲಕನ ನಿಯಂತ್ರಣ ತಪ್ಪಿದೆ. ತಕ್ಷಣ ಚಾಲಕ ಬಸ್ ನಿಲ್ಲಿಸಿದ್ದಾರೆ.

ಚಾಲಕನ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...