ಬೆಂಗಳೂರು: ಇನ್ನು ಕೆ-ಸೆಟ್ ಪರೀಕ್ಷೆ ಸೇರಿ ಯಾವುದೇ ನೇಮಕಾತಿ ಪರೀಕ್ಷೆಗಳಿಗೆ ಪ್ರತ್ಯೇಕವಾಗಿ ದಾಖಲೆಗಳನ್ನು ಸಲ್ಲಿಸಬೇಕಿಲ್ಲ. ಒಮ್ಮೆ ಸಲ್ಲಿಸುವ ದಾಖಲೆಗಳು ಮುಂದಿನ ಎಲ್ಲಾ ಪರೀಕ್ಷೆಗಳಿಗೂ ಅನ್ವಯವಾಗುವಂತೆ ತಂತ್ರಾಂಶ ಅಭಿವೃದ್ದಿಪಡಿಸಲಾಗುತ್ತಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ಹೆಚ್ಚುವರಿ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ಪ್ರತಿ ಪರೀಕ್ಷೆಗೆ ಅರ್ಜಿ ಸಲ್ಲಿಸುವಾಗ ದಾಖಲೆಗಳನ್ನು ನೀಡುವ ಬದಲು ಒಮ್ಮೆ ನೀಡಿದ ದಾಖಲೆಗಳನ್ನು ಎಲ್ಲಾ ಪರೀಕ್ಷೆಗಳಿಗೂ ಬಳಕೆಯಾಗುವಂತಹ ತಂತ್ರಾಂಶ ಅಭಿವೃದ್ದಿಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಕೆ-ಸೆಟ್ ಪರೀಕ್ಷೆ ಅಥವಾ ಯಾವುದೇ ನೇಮಕಾತಿ ಪರೀಕ್ಷೆಗಳಿಗೆ ಒಮ್ಮೆ ದಾಖಲಿ ಸಲ್ಲಿಸಿದವರು ಮುಂದೆ ಇನ್ನೊಂದು ಪರೀಕ್ಷೆ ಬರೆಯಲು ದಾಖಲೆ ಸಲ್ಲಿಸಬೇಕಿಲ್ಲ. ಈ ರೀತಿಯಾದ ತಂತ್ರಜ್ಞಾನವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಳವಡಿಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.