ಚಿಕ್ಕಮಗಳೂರು: ಬಾಕ್ಸ್ ನಲ್ಲಿ ಗೋಮಾಂಸ ಇಟ್ಟು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಸಂತೆಯಲ್ಲಿ ಅಸ್ಸಾಂ ಮೂಲದ ಕಾರ್ಮಿಕರು ಸ್ವೀಟ್ ಅಂಗಡಿ ಹಾಕಿಕೊಂಡು, ಗೋಮಾಂಸ ಮಾರಾಟ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಇಬ್ಬರನ್ನು ಬಂಧಿಸಲಾಗಿದೆ.
ವಾರದ ಸಂತೆಯಲ್ಲಿ ಸಿಹಿ ತಿಂಡಿ ಅಂಗಡಿ ಹಾಕಿದ್ದ ಅಸ್ಸಾಂ ಕಾರ್ಮಿಕರು ಅಕ್ರಮವಾಗಿ ದನದ ಮಾಂಸದ ಪ್ಯಾಕೆಟ್ ಗಳನ್ನು ತಮ್ಮ ಕಡೆಯವರಿಗೆ ಮಾರಾಟ ಮಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ, ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.