HomeKarnatakaನಕಲಿ ಅಂಕಪಟ್ಟಿ ಸಲ್ಲಿಸಿ ಅಂಚೆ ಇಲಾಖೆಯಲ್ಲಿ ಉದ್ಯೋಗ, ಆರೋಪಿಗೆ 7 ವರ್ಷ ಕಠಿಣ ಶಿಕ್ಷೆ

ನಕಲಿ ಅಂಕಪಟ್ಟಿ ಸಲ್ಲಿಸಿ ಅಂಚೆ ಇಲಾಖೆಯಲ್ಲಿ ಉದ್ಯೋಗ, ಆರೋಪಿಗೆ 7 ವರ್ಷ ಕಠಿಣ ಶಿಕ್ಷೆ

ಮಡಿಕೇರಿ: ನಕಲಿ ಅಂಕಪಟ್ಟಿ ಸಲ್ಲಿಸಿ ಅಂಚೆ ಇಲಾಖೆಯಲ್ಲಿ ಉದ್ಯೋಗ ಪಡೆದು ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 7 ವರ್ಷ ಕಠಿಣ ಶಿಕ್ಷೆ ಮತ್ತು 1.25 ಲಕ್ಷ ರೂ. ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

ಕಾರೆಕಾಡು ಗ್ರಾಮದ ಸಂದೇಶ್ ಎಂ.ಬಿ.(32) ಶಿಕ್ಷೆಗೆ ಒಳಗಾದ ವ್ಯಕ್ತಿ. 2019 ನೇ ಸಾಲಿನಲ್ಲಿ ಅಂಚೆ ಇಲಾಖೆಯಲ್ಲಿ ನಡೆದ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಯ ನೇಮಕಾತಿಯಲ್ಲಿ ಆನ್ಲೈನ್ ಮೂಲಕ ಸಂದೇಶ್ ಅರ್ಜಿ ಸಲ್ಲಿಸಿದ್ದು, ದಾಖಲೆ ಪರಿಶೀಲನೆಯ ಸಂದರ್ಭದಲ್ಲಿ ಅವರು ನಕಲಿ ಅಂಕಪಟ್ಟಿ ಸಲ್ಲಿಸಿರುವುದು ಪತ್ತೆಯಾಗಿತ್ತು.

ಅಂಚೆ ಇಲಾಖೆಯಲ್ಲಿ ಉದ್ಯೋಗ ಪಡೆಯುವ ಮೂಲಕ ವಂಚಿಸಿದ್ದ ಬಗ್ಗೆ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು 2022ರ ಫೆಬ್ರವರಿ 25ರಂದು ಆರೋಪಿ ಸಂದೇಶವನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಡಿಕೇರಿ ನಗರ ಠಾಣೆ ಪಿಎಸ್ಐ ಶ್ರೀನಿವಾಸ್ ಮತ್ತು ತನಿಖಾ ಸಹಾಯಕಿ ಹೆಚ್.ಸಿ. ದಿವ್ಯಾ ಅವರು ಪ್ರಕರಣದ ತನಿಖೆ ಕೈಗೊಂಡು 2022ರ ಡಿಸೆಂಬರ್ 27ರಂದು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸಿಜೆಎಂ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಕೆಯಾಗಿದ್ದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಜನವರಿ 10ರಂದು ತೀರ್ಪು ಪ್ರಕಟಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular