alex Certify ಡ್ರಗ್ಸ್ ಕೇಸ್ ನಲ್ಲಿ ನಟಿ ರಾಗಿಣಿ ದ್ವಿವೇದಿಗೆ ಬಿಗ್ ರಿಲೀಫ್: ಪ್ರಕರಣ ರದ್ದುಪಡಿಸಿದ ಹೈಕೋರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡ್ರಗ್ಸ್ ಕೇಸ್ ನಲ್ಲಿ ನಟಿ ರಾಗಿಣಿ ದ್ವಿವೇದಿಗೆ ಬಿಗ್ ರಿಲೀಫ್: ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಡ್ರಗ್ಸ್ ಮಾಫಿಯಾದೊಂದಿಗೆ ನಂಟು ಹೊಂದಿದ ಆರೋಪದಡಿ ನಟಿ ರಾಗಿಣಿ ದ್ವಿವೇದಿ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ಏಕಸದಸ್ಯ ಪೀಠ ರದ್ದುಪಡಿಸಿದೆ.

ರಾಗಿಣಿ ವಿರುದ್ಧ ಪಾರ್ಟಿ ಆಯೋಜಿಸಿ ಡ್ರಗ್ಸ್ ಬಳಕೆಗೆ ಅವಕಾಶ ಮಾಡಿಕೊಟ್ಟ ಆರೋಪವಿತ್ತು. ಆದರೆ, ಈ ಬಗ್ಗೆ ಯಾವುದೇ ಸಾಕ್ಷ್ಯಾಧಾರಗಳನ್ನು ಹಾಜರುಪಡಿಸಿಲ್ಲ. ಕೇವಲ ಸಹ ಆರೋಪಿಗಳ ಹೇಳಿಕೆ ಆಧರಿಸಿ ಕೇಸ್ ದಾಖಲಿಸಲಾಗಿದೆ ಎಂದು ರಾಗಿಣಿ ಪರ ವಕೀಲ ಎ. ಮೊಹಮ್ಮದ್ ತಾಹಿರ್ ವಾದ ಮಂಡಿಸಿದ್ದರು. ಪ್ರಕರಣ ರದ್ದುಪಡಿಸಿ ನ್ಯಾಯಮೂರ್ತಿ ಹೇಮಂತ್ ಚಂದನ ಗೌಡರ್ ಆದೇಶ ಹೊರಡಿಸಿದ್ದಾರೆ. ಎ. ನಾಲ್ಕು ಆರೋಪಿ ಪ್ರಶಾಂತ್ ರಂಕಾ ವಿರುದ್ಧದ ಪ್ರಕರಣವನ್ನು ಕೂಡ ರದ್ದು ಮಾಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...