ಕಲಬುರಗಿ: ಬೀದರ್ ನಲ್ಲಿ ರೈಲಿಗೆ ತಲೆಕೊಟ್ಟು ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯಲ್ಲಿ ನಾಲ್ವರು ಆರೋಪಿಗಳ ಮನೆ ಮೇಲೆ ಸಿಐಡಿ ದಾಳಿ ನಡೆಸಿದೆ.
ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಆರೋಪಿ ರಾಜು ಕಪನೂರ ಸೇರಿದಂತೆ ನಾಲ್ವರು ಆರೋಪಿಗಳ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ಕಲಬುರಗಿಯ ಕೈಗಾರಿಕಾ ಪ್ರದೇಶದಲ್ಲಿರುವ ರಾಜು ಕಪನೂರ್ ನಿವಾಸ, ಕಲಬುರ್ಗಿಯ ಘಾಟ್ಕೆ ಬಡಾವಣೆಯ ಗೋರಖ್ ನಾಥ, ಗಂಜ್ ಪ್ರದೇಶದಲ್ಲಿರುವ ನಂದಕುಮಾರ್ ಮನೆ ಸೇರಿ ಸಿಐಡಿ ತಂಡ 4 ಕಡೆ ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕಿದೆ.