ಹಾಸನ: ಮಕರ ಸಂಕ್ರಾಂತಿ ದಿನದಂದೇ ಸಾಲು ಸಾಲು ಅಪಘಾತ ಘಟನೆಗಳು ನಡೆದಿವೆ. ರಸ್ತೆ ಬದಿಯ ಕ್ಯಾಂಟೀನ್ ಗೆ ಲಾರಿಯೊಂದು ನುಗ್ಗಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಗುಳಗಳಲೆ ಬಳಿ ಈ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಚಲಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಕ್ಯಾಂಟಿನ್ ಗೆ ನುಗ್ಗಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದೆ.
ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.