ತುಮಕೂರು: ತುಮಕೂರಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಸಿರಿಧಾನ್ಯ ಹಬ್ಬದಲ್ಲಿ ಪಾಲ್ಗೊಂಡಿದ್ದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ತುಮಕೂರು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಮತ್ತು ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜಾ ಅವರಿಗೆ ಸೀರೆ ಉಡುಗೊರೆಯಾಗಿ ನೀಡಿದ್ದಾರೆ.
ಸಿರಿಧಾನ್ಯ ಹಬ್ಬಕ್ಕೆ ಚಾಲನೆ ನೀಡಿದ ನಂತರ ವಿವಿಧ ಮಳಿಗೆಳನ್ನು ವೀಕ್ಷಿಸುತ್ತಿದ್ದ ಸಚಿವ ಪರಮೇಶ್ವರ್ ಇಳಕಲ್ ಸೀರೆ ಮಳಿಗೆ ಬಳಿಗೆ ತೆರಳಿದ್ದಾರೆ. ತಮ್ಮ ಪತ್ನಿ ಕನ್ನಿಕಾ ಪರಮೇಶ್ವರಿ ಅವರಿಗೆ ಇಳಕಲ್ ಸೀರೆ ಖರೀದಿಸಿದ್ದಾರೆ. ಅಷ್ಟೇ ಅಲ್ಲದೆ ತಮ್ಮೊಂದಿಗೆ ಮಳಿಗೆ ವೀಕ್ಷಿಸಲು ಬಂದಿದ್ದ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರಿಗೂ ಸೀರೆ ಕೊಡಿಸಿದ್ದಾರೆ. ತಮ್ಮೊಂದಿಗೆ ಇದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಅವರ ಪತ್ನಿ, ತುಮಕೂರು ನಗರ ಪಾಲಿಕೆ ಆಯುಕ್ತೆ ಅಶ್ವಿಜಾ ಅವರಿಗೂ ಸೀರೆ ಖರೀದಿಸಿ ಕೊಟ್ಟು ಕಳಿಸಿದ್ದಾರೆ.
ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ “ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಹಾಗೂ ಸಿರಿಧಾನ್ಯ ಉತ್ಪಾದಕರು ಮತ್ತು ಮಾರುಕಟ್ಟೆದಾರರ ರಾಜ್ಯ ಮಟ್ಟದ ಕಾರ್ಯಾಗಾರ” ಕಾರ್ಯಕ್ರಮವನ್ನು ಉದ್ಘಾಟಿಸಿದೆ. pic.twitter.com/fsYXmVcwnK
— Dr. G Parameshwara (@DrParameshwara) January 13, 2025