ಚಿಕ್ಕಮಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಸಹೋದರ ಎಂಎಲ್ ಸಿ ಚನ್ನರಾಜ ಹಟ್ಟಿಹೋಳಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಸಚಿವೆ ಹೆಬ್ಬಾಳಕರ್ ಹಾಗೂ ಚನ್ನರಾಜ ಹಟ್ಟಿಹೊಳಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಘಟನೆ ಬೆನ್ನಲ್ಲೇ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಸಿ.ಟಿ.ರವಿ, ಇಂದು ಬೆಳಿಗ್ಗೆ ಬೆಳಗಾವಿಯ ಕಿತ್ತೂರು ಬಳಿ ಕಾರು ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಸಹೋದರ ಚನ್ನರಾಜ ಹಟ್ಟಿಹೊಳಿ ಬೇಗನೇ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.