ಚಿಕ್ಕಮಗಳೂರು: ಕಾಫಿ ನಾಡಿನಲ್ಲಿ ಮತ್ತೊಂದು ಮಂಗನ ಕಾಯಿಲೆ ಕೇಸ್ ಪತ್ತೆಯಾಗಿದೆ. 25 ವರ್ಷದ ಯುವಕನಿಗೆ ಕಾಯಿಲೆ ಇರುವುದು ದೃಢಪಟ್ಟಿದೆ.
ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಸಮೀಪದ ಮತ್ತಿಖಂಡ ಗ್ರಾಮದ ಯುವಕನ ರಕ್ತ ಪರೀಕ್ಷೆಯಲ್ಲಿ ಮಂಗನ ಕಾಯಿಲೆ ಇರುವುದು ದೃಢಪಟ್ಟಿದೆ. ಇದರಿಂದಾಗಿ ಮತ್ತಿಖಂಡ ಗ್ರಾಮದಲ್ಲಿ ಮಂಗನ ಕಾಯಿಲೆ ಭೀತಿ ಹೆಚ್ಚಾಗಿದೆ. ಗ್ರಾಮಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಡಿಗೆ ತೆರಳದಂತೆ ಜನರಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಗ್ರಾಮಸ್ಥರಿಗೆ ಡಿಎಂಪಿಎ ತೈಲವನ್ನು ವಿತರಿಸಲಾಗಿದೆ. ಕಾಯಿಲೆ ಇರುವ ಗ್ರಾಮಸ್ಥರ ಸ್ಯಾಂಪಲ್ ಸಂಗ್ರಹಿಸಲಾಗಿದೆ.