HomeKarnatakaವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 25 ಸಾವಿರ ರೂ. ವಿಶೇಷ ಪ್ರೋತ್ಸಾಹಧನಕ್ಕೆ ಅರ್ಜಿ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 25 ಸಾವಿರ ರೂ. ವಿಶೇಷ ಪ್ರೋತ್ಸಾಹಧನಕ್ಕೆ ಅರ್ಜಿ

2024-25 ನೇ ಸಾಲಿನಲ್ಲಿ ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜುಕೇಶನ್‍ನಿಂದ ಮಾನ್ಯತೆ ಪಡೆದಿರುವ ಧಾರವಾಡ ಜಿಲ್ಲೆಯಲ್ಲಿನ ಸರ್ಕಾರಿ, ಅರೇಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿ.ಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 25,000 ರೂ. ವಿಶೇಷ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಜನವರಿ 20, 2025 ರೊಳಗಾಗಿ https://sevasindu.karanataka. gov.in ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0836-2971590 ಗೆ ಸಂಪರ್ಕಿಸಬಹುದು ಎಂದು ಧಾರವಾಡ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular