ಹಾವೇರಿ: ಗುಡಿಸಲು ಮನೆಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮನೆಯಲ್ಲಿದ್ದ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆ ಬೆನ್ನೂರು ತಾಲೂಕಿನ ಹೊಳೆ ಅನ್ವೇರಿ ಗ್ರಾಮದಲ್ಲಿ ನಡೆದಿದೆ.
ನಿಗಪ್ಪ ಪೂಜಾರ ಎಂಬುವವರಿಗೆ ಸೇರಿದ ಗುಡಿಸಲು ಮನೆಯಲ್ಲಿ ಈ ಘಟನೆ ನಡೆದಿದೆ. ದೇವರ ಮುಂದೆ ಹಚ್ಚಿದ್ದ ದೀಪ ಬಿದ್ದು ಈ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಮನೆಯಲ್ಲಿದ್ದ ವಸ್ತಿಗಳು, ಬಟ್ಟೆ, ಪೀಠೋಪಕರಣಗಳು ಸುಟ್ಟು ಭಸ್ಮವಾಗಿವೆ.
ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಆದರೆ ಅಷ್ಟರಲ್ಲೇ ಮನೆ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ವಸ್ತುಗಳು ಸುಟ್ಟು ಕರಕಲಾಗಿವೆ.
ಹಲಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.