ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ 6 ನಕ್ಸಲರು ಶರಣಾಗತರಾದ ವಿಚಾರಕ್ಕೆ ಸಂಬಂಧಿಸಿದಂತೆ ಶರಣಾಗಿರುವ ನಕ್ಸಲರ ವಿರುದ್ಧದ ಪ್ರಕರಣಗಳ ಸಂಬಂಧ ತನಿಖೆಗೆ ಪೊಲೀಸರು ಸಿದ್ಧತೆ ಕೈಗೊಂಡಿದ್ದಾರೆ.
ಕಾಡಿನಲ್ಲಿ ಪತ್ತೆಯಾಗಿರುವ ಶಸ್ತ್ರಗಳ ಬಗ್ಗೆಯೂ ಪೊಲೀಸರು ತನಿಖೆ ನಡೆಸಲಿದ್ದಾರೆ. ಇಂದು ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟ್ ಗೆ ನಕ್ಸಲರನ್ನು ಕಸ್ಟಡಿಗೆ ಪಡೆಯುವ ಕುರಿತಂತೆ ಮನವಿ ಸಲ್ಲಿಸಲಾಗುವುದು.
15 ದಿನಗಳ ಕಾಲ ತಮ್ಮ ವಶಕ್ಕೆ ಶರಣಾಗತರಾದ ನಕ್ಸಲರನ್ನು ನೀಡುವಂತೆ ಪೊಲೀಸರು ಮನವಿ ಸಲ್ಲಿಸಲಿದ್ದಾರೆ. ಕೋರ್ಟ್ ವರ್ಷಕ್ಕೆ ನೀಡಿದರೆ ಚಿಕ್ಕಮಗಳೂರಿಗೆ ಕರೆತಂದು ವಿಚಾರಣೆ ನಡೆಸಲಿದ್ದಾರೆ. ಕೊಪ್ಪ ಡಿವೈಎಸ್ಪಿ ಬಾಲಾಜಿ ಸಿಂಗ್ ನೇತೃತ್ವದ ತಂಡ ಶರಣಾದ ನಕ್ಸಲರನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲು ಸಿದ್ಧತೆ ಮಾಡಿಕೊಂಡಿದೆ.