ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 9ರಂದು ಉಚಿತ ಸಾಮೂಹಿಕ ವಿವಾಹ ಏರ್ಪಡಿಸಲಾಗಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮಸ್ಥಳ ಟ್ರಸ್ಟ್ ವತಿಯಿಂದ ವರನಿಗೆ ಧೋತಿ, ಶಾಲು, ವಧುವಿಗೆ ಸೀರೆ, ರವಿಕೆ ಕಣ, ಮಂಗಳಸೂತ್ರ ಮತ್ತು ಹೂವಿನ ಹಾರ ನೀಡಲಾಗುವುದು.
ಸಾಮೂಹಿಕ ವಿವಾಹದಲ್ಲಿ ಮದುವೆಯಾಗಲು ಇಚ್ಛಿಸುವವರು 2025ರ ಏಪ್ರಿಲ್ 25ರೊಳಗೆ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಮಾಹಿತಿಗೆ ದೂರವಾಣಿ ಸಂಖ್ಯೆ 08256 266644, ವಾಟ್ಸಾಪ್ 9663464648 ಸಂಪರ್ಕಿಸಬಹುದಾಗಿದೆ.
ಶ್ರೀ ಕ್ಷೇತ್ರ ಧರ್ಮಧಿಕಾರಿ ಡಾ.ಡಿ. ವೀರೇಂದ್ರ ಹೆಗಡೆಯವರು 1972 ರಲ್ಲಿ ವರದಕ್ಷಿಣೆ ಮತ್ತು ಮದುವೆ ದುಂದು ವೆಚ್ಚ ತಡೆಯಲು ಉಚಿತ ಸಾಮೂಹಿಕ ವಿವಾಹ ಆರಂಭಿಸಿದ್ದರು. ಇದುವರೆಗೆ 12,900 ಜೋಡಿಗಳು ಮದುವೆಯಾಗಿದ್ದಾರೆ ಎಂದು ಹೇಳಲಾಗಿದೆ.