ಬೆಂಗಳೂರು: ಇಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯ ಪಾಲಿಗೆ ಬಿಗ್ ಡೇ ಆಗಿದೆ.
ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ತನಿಖೆಯ ವಿಚಾರವನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಇಂದು ರಿಟ್ ಅರ್ಜಿಯ ವಿಚಾರಣೆ ನಡೆಯಲಿದೆ.
ಧಾರವಾಡ ಪೀಠದಲ್ಲಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿಂದ ವಿಚಾರಣೆ ನಡೆಸಲಾಗುವುದು. ಲೋಕಾಯುಕ್ತ ಪೊಲೀಸರು ಸಲ್ಲಿಸಬೇಕಿದ್ದ ಅಂತಿಮ ವರದಿಗೆ ಜನವರಿ 28ರವರೆಗೆ ಹೈಕೋರ್ಟ್ ಗಡುವು ವಿಸ್ತರಿಸಿದೆ.
ಮುಖ್ಯಮಂತ್ರಿ ಪರವಾಗಿ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್, ಮನು ಸಿಂಘ್ವಿ ವಾದ ಮಂಡಿಸಲಿದ್ದಾರೆ. ಸರ್ಕಾರದ ಪರ ಕಪಿಲ್ ಸಿಬಲ್, ಎಜಿ ಶಶಿಕಿರಣ್ ಶೆಟ್ಟಿ ವಾದಿಸಲಿದ್ದಾರೆ. ಹಿಂದಿನ ಭೂಮಾಲೀಕ ದೇವರಾಜು ಪರ ದುಷ್ಯಂತ್ ದವೆ ವಾದಿಸಲಿದ್ದಾರೆ. ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲ ಕೆ.ಜಿ. ರಾಘವನ್ ವಾದ ಮಂಡಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ರಿಟ್ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ.