ಬೆಂಗಳೂರು: ಅನೈತಿಕ ಸಂಬಂಧ ಪ್ರಶ್ನಿಸಿದಕ್ಕೆ ವ್ಯಕ್ತಿಯೊಬ್ಬ ಪತ್ನಿ ಮತ್ತು ಮನೆಯವರಿಗೆ ಚಾಕುವಿನಿಂದ ಇರಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಸೊಂಡೆಕೊಪ್ಪದಲ್ಲಿ ನಡೆದಿದೆ.
ಪತ್ನಿ ಮಮ್ತಾಜ್, ಅತ್ತೆ ಶಬೀನಾ, ಅಣ್ಣ ಅರ್ಬಾಜ್ ಅವರಿಗೆ ಅಜರುದ್ದೀನ್ ಎಂಬಾತ ಚಾಕುವಿನಿಂದ ಇರಿದಿದ್ದಾನೆ. ಯುವತಿಯ ಜೊತೆಗೆ ಅಜರುದ್ದೀನ್ ಅಕ್ರಮ ಸಂಬಂಧ ಹೊಂದಿದ್ದ. ಈ ವಿಚಾರವಾಗಿ ಗಲಾಟೆಯಾಗಿ ಪತ್ನಿ ಸೇರಿ ಮೂವರಿಗೆ ಚಾಕುವಿನಿಂದ ಇರಿಯಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.