alex Certify ಗಮನಿಸಿ : ‘ಗ್ರಾಮ ಒನ್ ಕೇಂದ್ರ’ ಸ್ಥಾಪನೆಗೆ ಆನ್ ಲೈನ್ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ‘ಗ್ರಾಮ ಒನ್ ಕೇಂದ್ರ’ ಸ್ಥಾಪನೆಗೆ ಆನ್ ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಈ ಮೂಲಕ ಗ್ರಾಮೀಣ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪಿಸುತ್ತಿದೆ.

ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾಸಿಂಧು ಪೋರ್ಟಲ್ ಮೂಲಕ ಅನುಷ್ಠಾನಗೊಳಿಸುತ್ತಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಭದ್ರಾವತಿ ತಾಲೂಕಿನ ಕಲ್ಲಹಳ್ಳಿ, ಹೊಸನಗರ ತಾಲೂಕಿನ ಚಿಕ್ಕಜೇನಿ, ಸಾಗರ ತಾಲೂಕಿನ ಖಂಡಿಕ, ಆವಿನಹಳ್ಳಿ ಮತ್ತು ಹಿರೇನೆಲ್ಲೂರು, ಶಿಕಾರಿಪುರ ತಾಲೂಕಿನ ಚುರ್ಚಿಗುಂಡಿ, ಕೊರಟಿಗೆರೆ, ಶಿವಮೊಗ್ಗ ತಾಲೂಕಿನ ಸೋಗಾನೆ, ತೀರ್ಥಹಳ್ಳಿ ತಾಲೂಕಿನ ನಾಲೂರು (ಕೊಲಗಿ), ಬಸವಾನಿ, ದೇಮ್ಲಾಪುರ, ಅರಗ, ಮುಳಬಾಗಿಲು ಗ್ರಾಮಗಳಲ್ಲಿ ಗ್ರಾಮ ಒನ್ ಕೇಂದ್ರಗಳಿಗೆ ಆನ್ಲೈನ್ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತಿಯುಳ್ಳವರು ಅರ್ಜಿಗಳನ್ನು https://www.karnatakaone.gov.in/…/GramaOneFranchisee1crms ರಲ್ಲಿ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...