alex Certify BIG NEWS: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಸಿಎಂ ಡಿ.ಕೆ.ಶಿವಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಸಿಎಂ ಡಿ.ಕೆ.ಶಿವಕುಮಾರ್

ನವದೆಹಲಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ರಾಜ್ಯ ರಾಜಕೀಯ ಬೆಳವಣಿಗೆ ನಡುವೆ ಡಿಸಿಎಂ ಡಿ.ಕೆ.ಶಿವಕುಮಾರ್ ಖರ್ಗೆಯವರನ್ನು ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ.

ನವದೆಹಲಿಯ ಖರ್ಗೆ ನಿವಾಸದಲ್ಲಿ ನಿನ್ನೆ ರಾತ್ರಿ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಡಿ.ಕೆ.ಶಿವಕುಮಾರ್ ಭೇಟಿಯಾಗಿದ್ದಾರೆ. ಈ ವೇಳೆ ಬೆಳಗಾವಿಯಲ್ಲಿ ನಡೆಯಲಿರುವ ಎಐಸಿಸಿ ಅಧಿವೇಶನದ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.

ಇದೇ ವೇಳೆ ರಾಜ್ಯ ರಾಜಕೀಯ ಬೆಳವಣಿಗೆಗಳು, ಕಾಂಗ್ರೆಸ್ ಸರ್ವ ಸದಸ್ಯರ ಸಭೆ, ಸಿಎಲ್ ಪಿ ಸಭೆಯಲ್ಲಿ ನಡೆದ ಚರ್ಚೆಗಳ ಬಗ್ಗೆಯೂ ಡಿಸಿಎಂ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...