HomeKarnatakaBIG NEWS: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಮಾಲೀಕರ ಕುಟುಂಬಕ್ಕೆ 3 ಹಸು ಕೊಡಿಸಿದ ಸಚಿವ...

BIG NEWS: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಮಾಲೀಕರ ಕುಟುಂಬಕ್ಕೆ 3 ಹಸು ಕೊಡಿಸಿದ ಸಚಿವ ಜಮೀರ್ ಅಹ್ಮದ್

ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ದುಷ್ಕರ್ಮಿಗಳು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದ ಘಟನೆ ಹಿನ್ನೆಲೆಯಲ್ಲಿ ಹಸುವಿನ ಮಾಲೀಕರಿಗೆ ಸಚಿವ ಜಮೀರ್ ಅಹ್ಮದ್ ಮೂರು ಹಸುಗಳನ್ನು ಕೊಡಿಸಿದ್ದಾರೆ.

ಹಸು ಮಾಲೀಕ ಕರ್ಣ ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಅವರಿಗೆ ಸಚಿವ ಜಮೀರ್ ಅಹಮದ್ ಖಾನ್ ಅವರು ಮೂರು ಲಕ್ಷ ರೂ. ವೆಚ್ಚದಲ್ಲಿ ಮೂರು ಹಸು ಖರೀದಿಸಿ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಅಮುದಾ, ಹಸು ನಿರಾಕರಿಸಿದ ನನ್ನ ಸಹೋದರನ ಪರವಾಗಿ ನಾನು ಕ್ಷಮೆ ಕೋರುತ್ತೇನೆ. ಜಮೀರಣ್ಣ ಅವರು ಒಳ್ಳೆ ಮನಸ್ಸಿನಿಂದ ಹಸು ಕೊಡಿಸಿದ್ದಾರೆ. ಕೆಲವರು ಇದರಲ್ಲಿ ರಾಜಕಾರಣ ಮಾಡುತ್ತಿದ್ದು, ನಾವು ಶಾಸಕರ ಜತೆ ಇದ್ದೇವೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular