ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದ್ದು, ನ್ಯಾಯಾಲಯ ಮಹತ್ವದ ಆದೇಶ ನೀಡಿದೆ.
ಪ್ರಕರಣ ಸಂಬಂಧ ಬಿ.ಎಸ್.ಯಡಿಯೂರಪ್ಪ ಅವರಿಗೆ ವಿಚಾರಣೆಗೆ ಖುದ್ದು ಹಾಜರಾಗುವಂತೆ ನೀಡಿದ್ದ ವಿನಾಯಿತಿಯನ್ನು ಹೈಕೋರ್ಟ್ ವಿಸ್ತರಿಸಿದೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು. ತನ್ನ ವಿರುದ್ಧದ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಯಡಿಯೂರಪ್ಪ ಅವರಿಗೆ ವಿಚಾರಣೆಗೆ ಖುದ್ದು ಹಾಜರಾಗುವಂತೆ ಸೂಚಿಸಿತ್ತು. ಇದೀಗ ಖುದ್ದು ಹಾಜರಾತಿ ವಿನಾಯಿತಿಯನ್ನು ವಿಸ್ತರಣೆ ಮಾಡಿ ಆದೇಶ ನೀಡಿದೆ ಎಂದು ತಿಳಿದುಬಂದಿದೆ.