ಹುಬ್ಬಳ್ಳಿ : ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ಕಾಲ ಸನ್ನಿಹಿತವಾಗಿದೆ, ಮುಡಾ ಹಗರಣ ಅವರಿಗೆ ಕಂಟಕವಾಗಿದೆ. ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಆರೋಪಿಯಾಗಿದ್ದಾರೆ. ಮುಡಾದಲ್ಲಿ ಸಾಕಷ್ಟು ಹಗರಣ ನಡೆದಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಮುಡಾದಲ್ಲಿ 5000 ಕೋಟಿ ಹಗರಣ ನಡೆದಿದೆ. ಹಗರಣದ ವಿರುದ್ಧ ಹೋರಾಟ ನಡೆಸುತ್ತಿರುವ ಸ್ನೇಹಮಯಿ ಕೃಷ್ಣ ಅವರಿಗೆ ಧನ್ಯವಾದಗಳು. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ಕಾಲ ಸನ್ನಿಹಿತವಾಗಿದೆ. ದೆಹಲಿಗೆ ಹೋಗಿ ಎಷ್ಟೇ ಪ್ಯಾಚ್ ಅಪ್ ಮಾಡಿದರೂ ವರ್ಕೌಟ್ ಆಗಲ್ಲ ಎಂದರು.