ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ಮದುವೆಗೆ ನಾಲ್ಕು ದಿನಗಳ ಮೊದಲು (ಮಧು ಮಗಳು) 20 ವರ್ಷದ ಯುವತಿಯನ್ನು ಆಕೆಯ ತಂದೆಯೇ ಗುಂಡಿಕ್ಕಿ ಕೊಂದಿದ್ದಾನೆ.
ಸಂತ್ರಸ್ತೆ ಬೇರೊಬ್ಬರನ್ನು ಮದುವೆಯಾಗಲು ಬಯಸಿದ್ದರಿಂದ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಆರೋಪಿ ತನ್ನ ಮಗಳನ್ನು ಪೊಲೀಸ್ ಅಧಿಕಾರಿಗಳ ಮುಂದೆಯೇ ಗುಂಡಿಕ್ಕಿ ಕೊಂದಿದ್ದಾನೆ. ಸಂತ್ರಸ್ತೆಯನ್ನು ತನು ಗುರ್ಜರ್ ಎಂದು ಗುರುತಿಸಲಾಗಿದ್ದು, ತನ್ನ ಕುಟುಂಬವು ಫಿಕ್ಸ್ ಮಾಡಿದ ಮದುವೆಯನ್ನು ಈಕೆ ವಿರೋಧಿಸಿದ್ದಳು, ತನ್ನ ಸ್ವಂತ ಆಯ್ಕೆಯ ವ್ಯಕ್ತಿಯನ್ನು ಮದುವೆಯಾಗುವ ಬಯಕೆಯನ್ನು ವ್ಯಕ್ತಪಡಿಸಿದ್ದಳು ಎಂದು ವರದಿ ತಿಳಿಸಿದೆ.
ಗ್ವಾಲಿಯರ್ನ ಗೋಲಾ ಕಾ ಮಂದಿರ್ ಪ್ರದೇಶದಲ್ಲಿ ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಈ ಹತ್ಯೆ ನಡೆದಿದೆ. ಆರೋಪಿ ಮಹೇಶ್ ಗುರ್ಜರ್ ತನ್ನ ಮಗಳು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ವೀಡಿಯೊದಿಂದ ಕೋಪಗೊಂಡು, ದೇಶೀಯ ನಿರ್ಮಿತ ಬಂದೂಕನ್ನು ಬಳಸಿ ಅವಳನ್ನು ಹತ್ತಿರದಿಂದ ಗುಂಡು ಹಾರಿಸಿದ್ದಾನೆ ಎಂದು ಆರೋಪಿಸಲಾಗಿದೆ. ತನು ಅವರ ಸೋದರಸಂಬಂಧಿ ರಾಹುಲ್ ಕೂಡ ಹೆಚ್ಚುವರಿ ಗುಂಡುಗಳನ್ನು ಹಾರಿಸಿ ಆಕೆಯ ಸಾವಿಗೆ ಕಾರಣರಾದರು ಎಂದು ಆರೋಪಿಸಲಾಗಿದೆ.
ಸಂತ್ರಸ್ತೆ ಅಪ್ಲೋಡ್ ಮಾಡಿದ ಹಿನ್ನೆಲೆ ನಂತರ ಪೊಲೀಸರು ಘಟನಾ ಸ್ಥಳಕ್ಕೆ ಬಂದಿದ್ದರು. ಪೊಲೀಸರು ಸ್ಥಳದಲ್ಲಿದ್ದುಕೊಂಡು ಯುವತಿಯ ತಂದೆಯ ಮನವೊಲಿಕೆಗೆ ಯತ್ನಿಸುತ್ತಿದ್ದರು. ಆದರೆ ಪೊಲೀಸರ ಮುಂದೆಯೇ ನಡೆದಿದ್ದು ಮಾತ್ರ ಘೋರ ದುರಂತ.