ನವದೆಹಲಿ : ನಾಳಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾಳಿನ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡಿಸಲ್ಲ, ಮುಂದಿನ ವಾರ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಬಗ್ಗೆ ಚರ್ಚೆ ನಡೆಯಲಿದೆ ಎಂದರು. ಜಾತಿ ಗಣತಿ ವರದಿಯಲ್ಲಿ ಏನುಂಟು ಅಂತ ಗೊತ್ತಿಲ್ಲ, ವರದಿಯನ್ನು ಓಪನ್ ಮಾಡಿಲ್ಲ ಎಂದು ಹೇಳಿದರು.
ಸಚಿವ ಸಂಪುಟ ಸಭೆಯ ಮುಂದೆ ಇದೇ ಮೊದಲ ಬಾರಿಗೆ ವರದಿ ಮಂಡನೆಯಾಗಲಿದೆ ಎಂದು ಹೇಳಲಾಗಿತ್ತು. ಆದರೆ ನಾಳಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.