ನವದೆಹಲಿ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ ಬಹಿರಂಗ ಹೇಳಿಕೆ ನೀಡಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರು ಬದಲಾಗಬೇಕು ಎಂದು ಹೇಳಿಕೆ ನೀಡಿರುವ ವಿಚಾರವಾಗಿ ಹೈಕಮಾಂಡ್ ಏನು ನಿರ್ಧಾರ ಕೈಗೊಳ್ಳುತ್ತೆ ಅದೇ ಅಂತಿಮ ಎಂದರು.
ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಅವರ ತೀರ್ಮಾನವೇ ಅಂತಿಮ ಎಂದು ತಿಳಿಸಿದರು.
ಇದೇ ವೇಳೆ ಕಿಯೋನಿಕ್ಸ್ ಅಸೋಸಿಯೇಷನ್ ಅವರು ಬಾಕಿ ಇರುವ ಬಿಲ್ಲುಗಳು ಪಾವತಿಯಾಗದಿರುವ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಿಂದಿನ ಬಿಜೆಪಿ ಸರ್ಕಾರದವರು ದೊಡ್ಡ ಮೊತ್ತದ ಬಿಲ್ಲುಗಳನ್ನು ಪಾವತಿ ಮಾಡದೇ ಬಾಕಿ ಉಳಿಸಿದ್ದಾರೆ. ಈ ಬಿಲ್ಲುಗಳನ್ನು ಹಂತ ಹಂತವಾಗಿ ಪಾವತಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.