ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಯುವತಿಗೆ ಅಶ್ಲೀಲ ಮೆಸೇಜ್ ಕಳಿಸಿದವನ ಮೇಲೆ ಯುವತಿಯ ಅಣ್ಣ ಹಲ್ಲೆ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಕೆಂಪನಹಳ್ಳಿ ಬಳಿ ನಡೆದಿದೆ.
ಇನ್ಸ್ಟಾಗ್ರಾಮ್ ನಲ್ಲಿ ಯುವತಿಗೆ ಸತೀಶ್ ಎಂಬಾತ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದು, ಯುವತಿಯ ಅಣ್ಣ ರಮೇಶ್ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಯುವತಿ ಮೊಬೈಲ್ ನಿಂದ ಅಣ್ಣ ರಮೇಶ ಲೊಕೇಶನ್ ಕಳುಹಿಸಿದ್ದ. ಕೆಂಪಲಿಂಗನಹಳ್ಳಿ ಬಂದಾಗ ಏಕಾಏಕಿಕೆ ಮುಖಕ್ಕೆ ಗುದ್ದಿ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ.
ಹಲ್ಲೆಗೊಳಗಾದ ಸತೀಶನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಹಲ್ಲೆ ಮಾಡಿ ಪರಾರಿಯಾದ ರಮೇಶನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.