ಮೈಸೂರು: ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಬರ್ಬರವಾಗಿ ಹತ್ಯೆ ಮಾಡಿದ್ದ ಕಣಿಯನಹುಂಡಿ ಗ್ರಾಮದಲ್ಲಿ ನಡೆದಿದೆ.
ದೇವರಾಜು ಎಂಬಾತ ಪತ್ನಿ ತೇಜು(26) ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದಲ್ಲಿ ಘಟನೆ ನಡೆದಿದೆ. 7 ವರ್ಷಗಳ ಹಿಂದೆ ಸಂಬಂಧಿ ತೇಜು ಅವರನ್ನು ದೇವರಾಜು ಮದುವೆಯಾಗಿದ್ದ. ತೇಜು -ದೇವರಾಜು ದಾಂಪತ್ಯಕ್ಕೆ ಸಾಕ್ಷಿಯಾಗಿ ಇಬ್ಬರು ಮಕ್ಕಳಿದ್ದಾರೆ.
ಮೈಸೂರು ತಾಲೂಕಿನ ಗೋಪಾಲಪುರದ ನಿವಾಸಿಯಾಗಿರುವ ತೇಜು, ಪತಿ ಮತ್ತು ಮಕ್ಕಳನ್ನು ಬಿಟ್ಟು ಪರಪುರುಷನೊಂದಿಗೆ ಓಡಿಹೋಗಿದ್ದಳು.
ವಾರದ ಹಿಂದೆ ಆಕೆಯನ್ನು ಕರೆತಂದು ಹಿರಿಯರು ನ್ಯಾಯ ಪಂಚಾಯಿತಿ ಮಾಡಿದ್ದರು. ನಂತರ ದೇವರಾಜು ಆಕೆಯನ್ನು ಮನೆಗೆ ಸೇರಿಸಿಕೊಂಡಿದ್ದ. ಮಧ್ಯಾಹ್ನ ಗಲಾಟೆ ನಡೆದು ಮಚ್ಚಿನಿಂದ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ. ಪತ್ನಿ ವರ್ತನೆಯಿಂದ ಬೇಸತ್ತು ಮರ್ಯಾದೆಗೆ ಅಂಜಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
ಪತ್ನಿ ತೇಜು ಹತ್ಯೆಗೈದ ಆರೋಪಿ ದೇವರಾಜು ಠಾಣೆಗೆ ಶರಣಾಗಿದ್ದಾನೆ. ಕೇಸು ದಾಖಲಿಸಿಕೊಂಡು ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಹೆಚ್.ಡಿ. ಕೋಟೆ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.