alex Certify ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ರಾಜ್ಯದ ಅನುದಾನಿತ ಪ್ರೌಢಶಾಲೆಗಳಲ್ಲಿ ಬೋಧಕ ಹುದ್ದೆಗಳ ಭರ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ರಾಜ್ಯದ ಅನುದಾನಿತ ಪ್ರೌಢಶಾಲೆಗಳಲ್ಲಿ ಬೋಧಕ ಹುದ್ದೆಗಳ ಭರ್ತಿ

ಬೆಂಗಳೂರು: ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ನಿಧನ, ರಾಜೀನಾಮೆ, ಹಾಗೂ ಇತರ ಕಾರಣಗಳಿಂದ ಬಾಲಿಯಾದ ಬೋದಕ ಹುದ್ದೆಗಳನ್ನು ಭರ್ತಿ ಮಾಡಲು ಆದೇಶಿಸಲಾಗಿದೆ.

ರಾಜ್ಯದ ಅನುದಾನಿತ ಪ್ರೌಢಶಾಲೆಗಳಲ್ಲಿ ದಿನಾಂಕ:01.01.2016 ರಿಂದ 31.12.2020ರವರೆಗೆ ನಿಧನ, ನಿವೃತ್ತಿ, ರಾಜೀನಾಮೆ ಹಾಗೂ ಇತರೆ ಕಾರಣಗಳಿಂದ ಖಾಲಿಯಾದ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿಸಿ ಆದೇಶಿಸಿದೆ. ಸದರಿ ಆದೇಶದಲ್ಲಿ ಅನುದಾನಿತ ಶಾಲೆಗಳು ಆನ್‌ಲೈನ್ ಮೂಲಕ ವಿವರಗಳು/ದಾಖಲೆಗಳನ್ನು ಸಲ್ಲಿಸಲು ತಂತ್ರಾಂಶವನ್ನು ಅಭಿವೃದ್ಧಿಪಡಿಸುವುದು ಹಾಗೂ ಈ ತಂತ್ರಾಂಶದ ಮೂಲಕ ವ್ಯವಹರಿಸುವುದು ಎಂದು ಸೂಚಿಸಲಾಗಿರುತ್ತದೆ.

ಸರ್ಕಾರದ ಆದೇಶ ದಿನಾಂಕ:07-08-2024 ಹಾಗೂ ಸರ್ಕಾರದ ಪ್ರದಾನ ಕಾರ್ಯದರ್ಶಿಗಳು ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ರವರ ಟಿಪ್ಪಣಿ ದಿನಾಂಕ 24-10-2024ರಂತೆ ಅನುದಾನಿತ ಶಿಕ್ಷಕರ ಖಾಲಿಯಾದ ಬೋದಕ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ತಂತ್ರಾಂಶ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿರುತ್ತದೆ.

ತಂತ್ರಾಂಶವು ಕೆಳಕಂಡ ಆರು ಹಂತಗಳನ್ನು ಒಳಗೊಂಡಿದೆ.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗಿನಲ್ಲಿ ಅನುದಾನಿತ ಶಾಲೆಗಳ ಮಂಜೂರಾದ/ಕಾರ್ಯನಿರತ ಮತ್ತು ಅರ್ಹ ಖಾಲಿ ಹುದ್ದೆಗಳ ಮಾಹಿತಿ ಇಂದೀಕರಿಸುವುದು.

ಆಡಳಿತ ಮಂಡಳಿಯಿಂದ ಖಾಲಿ ಹುದ್ದೆ ಭರ್ತಿಗೆ ಅನುಮತಿ ಕೋರಿ ಸಂಬಂಧಿಸಿದ ಆಯುಕ್ತಾಲಯಗಳಿಗೆ ಪ್ರಸ್ತಾವನೆ ಸಲ್ಲಿಕೆ.

ಆಯಾ ಆಯುಕ್ತಾಲಯಗಳಲ್ಲಿ ಸಮಿತಿಗಳನ್ನು ರಚಿಸಿ ಪ್ರಸ್ತಾವನೆಗಳನ್ನು ಪರಿಶೀಲಿಸಿ ಶಿಫಾರಸು, ಮಾಡುವುದು ಶಿಫಾರಸ್ಸು ಆಧರಿಸಿ ಖಾಲಿ ಹುದ್ದೆ ಭರ್ತಿಗೆ ಅನುಮತಿ ನೀಡುವುದು.

ಆಡಳಿತ ಮಂಡಳಿಗಳು ಅನುಮತಿಸಿದ ಹುದ್ದೆಗಳಿಗೆ ನಿಯಮಾನುಸಾರ ನೇಮಕಾತಿ ಪ್ರಕ್ರಿಯೆ ಕೈಗೊಂಡು ಸಂಬಂಧಿಸಿದ ಉಪನಿರ್ದೇಶಕರಿಗೆ ನೇಮಕಾತಿ ಅನುಮೋದನೆಗೆ ಆನ್‌ಲೈನ್‌ನಲ್ಲಿ ಪ್ರಸ್ತಾವನೆ ಸಲ್ಲಿಕೆ

ಉಪನಿರ್ದೇಶಕರಿಂದ ಪರಿಶೀಲಿಸಿ ಸಂಬಂದಿಸಿದ ಆಯುಕ್ತಾಲಯಗಳಿಗೆ ಆನ್‌ಲೈನ್‌ನಲ್ಲಿ ಪ್ರಸ್ತಾವನೆಗಳ ಸಲ್ಲಿಕೆ

ಸಂಬಂದಿಸಿದ ಆಯುಕ್ತಾಲಯಗಳಿಂದ ಸರ್ಕಾರಕ, ಆನ್‌ಲೈನ್‌ನಲ್ಲಿ ಅನುಮೋದನೆಗೆ ಸಲ್ಲಿಕೆ

ಮೇಲೆ ತಿಳಿಸಿರುವ ಆರು ಹಂತಗಳಲ್ಲಿ ಮೊದಲ ಎರಡು ಹಂತಗಳ ತಂತ್ರಾಂಶ ಅಭಿವೃದ್ಧಿ ಕಾರ್ಯ ಪೂರ್ಣಗೊಂಡಿದ್ದು ಉಳಿದ ಹಂತಗಳ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿರುತ್ತದೆ. ಎಲ್ಲಾ ನೇಮಕಾತಿ ಪುಕ್ರಿಯೆಗಳಿಗೆ ಹೊಸದಾಗಿ ಅಧಿಸೂಚನೆ ಹೊರಡಿಸದಿರಲು ಆದೇಶಿಸಲಾಗಿದೆ. ಸದರಿ ಆದೇಶದಂತೆ ಮೊದಲ ಹಂತದ ತಂತ್ರಾಂಶ (BEO Login) ನ್ನು ಚಾಲ್ತಿಗೊಳಿಸುವುದನ್ನು ತಡೆಹಿಡಿದು, ಈ ಕುರಿತು ಸರ್ಕಾರಕ್ಕೆ ಮಾರ್ಗದರ್ಶನ ಕೋರಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...