ಬೆಂಗಳೂರು: ಬೆಂಗಳೂರು ಕೇಂದ್ರ ಭಾಗದಲ್ಲಿನ ಆನಂದರಾವ್ ಸರ್ಕಲ್ ಬಳಿ 59 ಮಹಡಿಗಳ ಬೃಹತ್ ಅವಳಿ ಕಟ್ಟಡ ಗೋಪುರ ನಿರ್ಮಾಣಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡುವ ಸಾಧ್ಯತೆ ಇದೆ.
ಆನಂದರಾವ್ ಸರ್ಕಲ್ ಸಮೀಪದ 8.30 ಎಕರೆ ಸರ್ಕಾರಿ ಜಾಗದಲ್ಲಿ 5.23 ಎಕರೆ ಜಾಗ ಬಳಕೆ ಮಾಡಿಕೊಂಡು ಬಹುಮಹಡಿ ಅವಳಿ ಕಟ್ಟಡ ನಿರ್ಮಾಣಕ್ಕೆ 2020ರಲ್ಲಿ ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದ್ದು, ರಾಷ್ಟ್ರೀಯ ಕಟ್ಟಡಗಳ ನಿರ್ಮಾಣ ನಿಗಮ ಸಂಸ್ಥೆಯಿಂದ ನಿರ್ಮಾಣದ ವೆಚ್ಚ ಭರಿಸಿ ಅವಳಿ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವನೆಗೆ ಸಂಪುಟದಲ್ಲಿ ಒಪ್ಪಿಗೆ ನೀಡುವ ಸಾಧ್ಯತೆ ಇದೆ.
ಸುಮಾರು 1,500 ಕೋಟಿ ರೂಪಾಯಿ ವೆಚ್ಚದಲ್ಲಿ ಇದನ್ನು ನಿರ್ಮಿಸಲು ಉದ್ದೇಶಿಸಲಾಗಿದ್ದು, ಇಲ್ಲಿಂದ ಕೆಂಪೇಗೌಡ ಬಸ್ ನಿಲ್ದಾಣ, ಮೆಟ್ರೋ ನಿಲ್ದಾಣ, ಸಂಗೊಳ್ಳಿ ರಾಯಣ್ಣ ಕೇಂದ್ರ ರೈಲ್ವೆ ನಿಲ್ದಾಣದವರೆಗೆ ಸ್ಕೈವಾಕ್ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ ಎಂದು ಹೇಳಲಾಗಿದೆ.