ಬೆಂಗಳೂರು: ಬೆಂಗಳೂರಿನಲ್ಲಿ 25 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹೆಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೈಹಿಕ ಸಂಪರ್ಕಕ್ಕಾಗಿ ಖಾಸಗಿ ಫೋಟೋ, ವಿಡಿಯೋ ತೋರಿಸಿ ವ್ಯಕ್ತಿ ಬೆದರಿಕೆ ಹಾಕಿದ್ದಾನೆ. ನಗರದ ಹೋಟೆಲ್ ವೊಂದರಲ್ಲಿ ರೂಮ್ ಬುಕ್ ಮಾಡಿದ್ದ ಆರೋಪಿ ಯುವತಿಯನ್ನು ಹೋಟೆಲ್ ರೂಮ್ ಗೆ ಬರುವಂತೆ ಕರೆದಿದ್ದ. ಬರದಿದ್ದರೆ ಫೋಟೋ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದ. ಇದರಿಂದ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆರು ವರ್ಷದಿಂದ ಯುವತಿ ಮತ್ತು ಆರೋಪಿಗೆ ಪರಿಚಯ ಇತ್ತು. ಆರೋಪಿ ಸಂಬಂಧದಲ್ಲಿ ಯುವತಿಗೆ ಮಾವನಾಗಬೇಕು. ಮೊದಲು ಇಬ್ಬರು ಚೆನ್ನಾಗಿದ್ದು, ಟ್ರಿಪ್ ಹೋಗುತ್ತಿದ್ದರು. ಇತ್ತೀಚೆಗೆ ಆರೋಪಿ ದೈಹಿಕ ಸಂಪರ್ಕಕ್ಕೆ ಪೀಡಿಸುತ್ತಿದ್ದ. ಇದರಿಂದ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವೈಟ್ ಫೀಲ್ಡ್ ವಿಭಾಗದ ಡಿಸಿಪಿ ಶಿವಕುಮಾರ್ ಮಾಹಿತಿ ನೀಡಿದ್ದಾರೆ.