ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದ 6 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಒಟ್ಟು 06 ಜಿಲ್ಲೆಗಳಲ್ಲಿ ಇಂದು ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ,ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಕೂಡ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಹಾವೇರಿ, ಧಾರವಾಡ, ಬೆಳಗಾವಿ, ವಿಜಯಪುರ, ಬಾಗಲಕೋಟೆ ,ಗದಗ, ಕೊಪ್ಪಳ, ರಾಯಚೂರು, ಕಲಬುರಗಿ, ಬೀದರ್, ಯಾದಗಿರಿ ಸೇರಿದಂತೆ ರಾಜ್ಯಾದ್ಯಂತ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ, ಆಗಾಗ ಬಿಸಿಲು ಹೀಗೆ ನೆರಳು ಬೆಲಕಿನ ಆಟ ಮುಂದುವರೆದಿದೆ. ಚಳಿಯೊಂದಿಗೆ ಬಿರುಗಾಳಿಯೂ ಬೀಸುತ್ತಿದೆ.