ಶಿವಮೊಗ್ಗ: ಮಾರ್ಗ ಮಧ್ಯ ಏಕಾಏಕಿ ರಸ್ತೆಗೆ ಎಮ್ಮೆ ಅಡ್ಡ ಬಂದ ಹಿನ್ನೆಲೆಯಲ್ಲಿ ಬೈಕ್ ಡಿಕ್ಕಿ ಹೊಡೆದು ಹಿಂಬದಿ ಸವಾರ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ತವನಂದಿ ಗ್ರಾಮದ ಭೂತಪ್ಪನ ಗುಡಿ ಸಮೀಪ ನಡೆದಿದೆ.
ಗಣಪತಿ(46) ಮೃತಪಟ್ಟವರು ಎಂದು ಹೇಳಲಾಗಿದೆ. ಬೈಕ್ ನಲ್ಲಿ ಶ್ರೀಕಾಂತ್ ಜೊತೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ರಸ್ತೆಗೆ ಎಮ್ಮೆ ಅಡ್ಡ ಬಂದಿದ್ದು, ಅದಕ್ಕೆ ಡಿಕ್ಕಿ ಹೊಡೆದು ಇಬ್ಬರೂ ಕೆಳಗೆ ಬಿದ್ದಿದ್ದಾರೆ. ತಲೆಗೆ ತೀವ್ರ ಪೆಟ್ಟಾಗಿ ಹಿಂಬದಿ ಸಮಾರ ಗಣಪತಿ ಸಾವನ್ನಪ್ಪಿದ್ದಾರೆ. ಬೈಕ್ ಚಾಲನೆ ಮಾಡುತ್ತಿದ್ದ ಶ್ರೀಕಾಂತ್ ಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.