ಕೆ ಎಸ್ ನಂದೀಶ್ ನಿರ್ದೇಶನದ ರಿಷಿ ಅಭಿನಯದ ‘ರುದ್ರ ಗರುಡ ಪುರಾಣ’ ಚಿತ್ರದ ಟ್ರೈಲರ್ ನಿನ್ನೆ ಅಶ್ವಿನಿ ಆರ್ಟ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಈ ಟ್ರೈಲರ್ ಕೆಲವೇ ಕ್ಷಣಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದುಕೊಂಡಿದ್ದು, ನೋಡುಗರಲ್ಲಿ ಕುತೂಹಲ ಮೂಡಿಸಿದೆ.
ಈ ಚಿತ್ರದಲ್ಲಿ ರಿಷಿ ಅವರಿಗೆ ಜೋಡಿಯಾಗಿ ಪ್ರಿಯಾಂಕ ಅಭಿನಯಿಸಿದ್ದು, ಶಿವರಾಜ್ ಕೆ ಆರ್ ಪೇಟೆ, ಜಗ್ಗಪ್ಪ, ಅಶ್ವಿನಿ ಗೌಡ, ರಾಮ್ ಪವನ್, ಗಿರಿ ಹಾಗೂ ಕೆ ಎಸ್ ಶ್ರೀಧರ್ ಉಳಿದ ಪಾತ್ರ ವರ್ಗದಲ್ಲಿದ್ದಾರೆ.
ಅಶ್ವಿನಿ ಆರ್ಟ್ಸ್ ಬ್ಯಾನರ್ ನಲ್ಲಿ ಅಶ್ವಿನಿ ವಿಜಯ್ ಲೋಹಿತ್ ನಿರ್ಮಾಣ ಮಾಡಿದ್ದು, ಮನು ಶೇಡ್ಗಾರ್ ಸಂಕಲನ, ಸಂದೀಪ್ ಕುಮಾರ್ ಛಾಯಾಗ್ರಹಣ, ರಘು ನಿಡುವಳ್ಳಿ ಸಂಭಾಷಣೆ ಹಾಗೂ ಬಾಲಾ ಮಾಸ್ಟರ್ ನೃತ್ಯ ನಿರ್ದೇಶನವಿದೆ. ಇದೇ ಜನವರಿ 24 ರಂದು ಈ ಸಿನಿಮಾ ರಾಜ್ಯಾದ್ಯಂತ ತೆರೆ ಕಾಣಲಿದೆ.