ಬೆಂಗಳೂರು : ಬೆಂಗಳೂರಿನ ಬಾಗಲೂರಿನ ಅಪಾರ್ಟ್ ಮೆಂಟ್ ಗುಂಡು ಹಾರಿಸಿ ರೌಡಿಶೀಟರ್ ಓರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಗಣಿ ಅಲಿಯಾಸ್ ಝಲಕ್ ಎಂಬ ರೌಡಿಯನ್ನು ಮತ್ತೋರ್ವ ರೌಡಿಶೀಟರ್ ಬ್ರಿಜೇಶ್ ಕೊಲೆ ಮಾಡಿದ್ದಾನೆ. ಬಾಗಲೂರಿನ ಅಪಾರ್ಟ್ ಮೆಂಟ್ ನಲ್ಲಿ 2 ಸುತ್ತು ಗುಂಡು ಹಾರಿಸಿ ಗಣಿಯನ್ನು ಕೊಲ್ಲಲಾಗಿದೆ.
ಸಂಪಿಗೆಹಳ್ಳಿಯಲ್ಲಿ ರೌಡಿಶೀಟರ್ ಆಗಿದ್ದ ಗಣಿಯನ್ನು ಕೊಲೆ ಮಾಡಿದ ದುಷ್ಕರ್ಮಿಗಳು ನಂತರ ತಮಿಳುನಾಡಿನ ನಿರ್ಜನ ಪ್ರದೇಶಕ್ಕೆ ಕೊಂಡೊಯ್ದು ಶವ ಸುಟ್ಟು ಹಾಕಿದ್ದಾರೆ ಎನ್ನಲಾಗಿದೆ.ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.