alex Certify BIG NEWS: ಹುದ್ದೆಗಳು ಅಂಗಡಿಯಲ್ಲಿ ಸಿಗುತ್ತದೆಯೇ? ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಯಾವುದೇ ಪ್ರಯೋಜನವಿಲ್ಲ: ಮತ್ತೆ ಪುನರುಚ್ಛರಿಸಿದ ಡಿಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹುದ್ದೆಗಳು ಅಂಗಡಿಯಲ್ಲಿ ಸಿಗುತ್ತದೆಯೇ? ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಯಾವುದೇ ಪ್ರಯೋಜನವಿಲ್ಲ: ಮತ್ತೆ ಪುನರುಚ್ಛರಿಸಿದ ಡಿಸಿಎಂ

ಬೆಂಗಳೂರು: ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಮತ್ತೊಮ್ಮೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಹುದ್ದೆ ಬದಲಾವಣೆ ಚರ್ಚೆ ಕುರಿತು ಉತ್ತರಿಸಿಸುತ್ತಾ, ನಾವು ಮಾಡುವ ಕೆಲಸ, ಶ್ರಮವನ್ನು ಪಕ್ಷದ ನಾಯಕರು ಗುರುತಿಸಿ ಅದಕ್ಕೆ ಸೂಕ್ತವಾಗಿ ಹುದ್ದೆ ನೀಡುತ್ತಾರೆ. ಮಾಧ್ಯಮಗಳ ಮುಖಾಂತರ ಯಾರಾದರೂ ಹುದ್ದೆ ಕೇಳುತ್ತಾರೆಯೇ? ಎಂದು ಪ್ರಶ್ನಿಸಿದರು.

ಪಕ್ಷದ ವಿಚಾರದ ವಿಚಾರವಾಗಿ ಯಾವುದೇ ಬೆಳವಣಿಗೆ ಇದ್ದರೂ ನಾನೇ ಸುದ್ದಿಗೋಷ್ಠಿ ಕರೆದು ಮಾಹಿತಿ ನೀಡುತ್ತೇನೆ. ಈಗ ನಮ್ಮ ಪಕ್ಷ ಸಂಘಟನೆ ಮಾಡಿ, ಪಕ್ಷ ಉಳಿಸಿ, ಬೆಳೆಸುವ ಕೆಲಸ ಮಾಡಬೇಕು. ಪಕ್ಷದಲ್ಲಿ ಎಲ್ಲರೂ ಶಿಸ್ತು ಕಾಪಾಡಬೇಕು ಎಂದು ನಮ್ಮ ಮುಖ್ಯಮಂತ್ರಿಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳು ಬುದ್ಧಿವಾದ ಹೇಳಿದ್ದಾರೆ. ಯಾವುದೇ ವಿಚಾರವಾಗಿ ಬಹಿರಂಗವಾಗಿ ಚರ್ಚೆ ಮಾಡದಂತೆ ಸೂಚಿಸಿದ್ದಾರೆ ಎಂದರು.

ಪಕ್ಷದ ವಿಚಾರ ಮಾಧ್ಯಮಗಳ ಮುಂದೆ ಮಾತನಾಡುವಂತಹದಲ್ಲ. ಏನೇ ಇದ್ದರೂ ಎಐಸಿಸಿ ಅಧ್ಯಕ್ಷರು, ರಾಹುಲ್ ಗಾಂಧಿ, ಮುಖ್ಯಮಂತ್ರಿ ಅಥವಾ ನನ್ನ ಬಳಿ ಬಂದು ಮಾತನಾಡಲಿ. ಇದು ಕೇವಲ ಕಾಂಗ್ರೆಸ್ ಮಾತ್ರವಲ್ಲ. ಬಿಜೆಪಿ, ಜೆಡಿಎಸ್, ರೈತ ಸಂಘ ಸೇರಿದಂತೆ ಯಾವುದೇ ಪಕ್ಷವಾದರೂ ಪಕ್ಷದ ವಿಚಾರವನ್ನು ಆಂತರಿಕವಾಗಿ ಚರ್ಚೆ ಮಾಡಬೇಕು ಎಂದು ಹೇಳುತ್ತೇನೆ. ನಾನು ಯಾವುದಾದರೂ ಹುದ್ದೆ ಬಯಸಿದರೆ ನೀವು (ಮಾಧ್ಯಮಗಳು) ಆ ಸ್ಥಾನ ನನಗೆ ಕೊಡಿಸುತ್ತೀರಾ? ಅಥವಾ ಈ ಹುದ್ದೆಗಳು ಅಂಗಡಿಯಲ್ಲಿ ಸಿಗುತ್ತದೆಯೇ? ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಯಾವುದೇ ಪ್ರಯೋಜನವಿಲ್ಲ. ಬದಲಿಗೆ ಇದರಿಂದ ವ್ಯತಿರಿಕ್ತ ಪರಿಣಾಮ ಬೀರುತ್ತದೆ” ಎಂದು ಕೇಳಿದರು.

ಈ ಪಕ್ಷವನ್ನು ಕೇವಲ ಡಿ.ಕೆ. ಶಿವಕುಮಾರ್ ಒಬ್ಬನೇ ಅಧಿಕಾರಕ್ಕೆ ತಂದಿಲ್ಲ. ಕಾರ್ಯಕರ್ತರು, ಮತದಾರರು ನಮ್ಮ ಮೇಲೆ ಅಪಾರವಾದ ವಿಶ್ವಾಸ ಇಟ್ಟು ನಮಗೆ ಅಧಿಕಾರ ನೀಡಿದ್ದಾರೆ. ಇದನ್ನು ನಾವು ಉಳಿಸಿಕೊಳ್ಳಬೇಕು, ಉಳಿಸಿಕೊಳ್ಳುತ್ತೇವೆ. ಇದು ಕಾರ್ಯಕರ್ತರ ಹಾಗೂ ಮತದಾರರ ಪಕ್ಷ. ಇದಕ್ಕೆ ತನ್ನದೇ ಆದ ದೊಡ್ಡ ಇತಿಹಾಸವಿದೆ. ಯಾರೇ ಇರಲಿ, ಹೋಗಲಿ ತನ್ನನ್ನು ತಾನು ಉಳಿಸಿಕೊಳ್ಳುವ ಶಕ್ತಿ ಈ ಪಕ್ಷಕ್ಕೆ ಇದೆ. ಮಹಾತ್ಮಾ ಗಾಂಧೀಜಿ ಅವರು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಅಧಿಕಾರವನ್ನು ತ್ಯಾಗ ಮಾಡಿದ್ದಾರೆ. ಅಂಬೇಡ್ಕರ್ ಅವರು ಸಂವಿಧಾನ ಕೊಟ್ಟರು ಅವರು ಯಾವ ಅಧಿಕಾರ ಪಡೆದಿದ್ದಾರೆ? ನಾವು ಅವರನ್ನೆಲ್ಲ ಸ್ಮರಿಸಬೇಕು. ಹೀಗಾಗಿ ಮಾಧ್ಯಮಗಳ ಮುಂದೆ ಮಾತನಾಡುವುದಕ್ಕಿಂತ ಪಕ್ಷ ಬಹಳ ಮುಖ್ಯ ಎಂದು ನಾನು ಬಹಳ ನಮ್ರತೆಯಿಂದ ಮನವಿ ಮಾಡುತ್ತೇನೆ. ಯಾರಿಗಾದರೂ ಏನೇ ಸಮಸ್ಯೆ ಇದ್ದರೂ ಹೈಕಮಾಂಡ್ ಜತೆ ಚರ್ಚಿಸಿ ಬಗೆಹರಿಸಿಕೊಳ್ಳಿ ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...