ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಬಾಂದ್ರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಡಿಸಿಪಿ ದೀಕ್ಷಿತ್ ಗೆಡಮ್ ತಿಳಿಸಿದ್ದಾರೆ.
ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಪಿ ದೀಕ್ಷಿತ್, ಆರೋಪಿಗಳ ಪತ್ತೆಗಾಗಿ 10 ವಿಶೇಷ ತಂಡ ರಚನೆ ಮಾಡಲಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದರು.
ಕಳೆದ ರಾತ್ರಿ ನಟ ಸೈಫ್ ಅಲಿಖಾನ್ ಮನೆಗೆ ದುಷ್ಕರ್ಮಿಗಳು ನುಗ್ಗಿದ್ದಾರೆ. ದರೋಡೆಗೆ ಯತ್ನಿಸಿದ್ದ ವೇಳೆ ನಟ ಸೈಫ್ ಅಲಿಖಾನ್ ಮೇಲೆ ಹಲ್ಲೆ ನಡೆದಿದೆ ಎಂದು ಹೇಳಿದರು.
ದರೋಡೆಕೋರರಿಂದ ಚಾಕು ಇರಿತಕ್ಕೆ ಒಳಗಾಗಿರುವ ನಟ ಸೈಫ್ ಅಲಿಖಾನ್, ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಶಸ್ತ್ರಚಿಕಿತ್ಸೆ ನೀಡಲಾಗಿದೆ. ದೇಹದ 6 ಕಡೆಗಳಲ್ಲಿ ಚಾಕು ಇರಿಯಲಾಗಿತ್ತು. ಸದ್ಯ ಸೈಫ್ ಅಲಿಖಾನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.