ಬೆಂಗಳೂರು : ರಾಜ್ಯ ಸರ್ಕಾರ ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತ್ ನೌಕರರಿಗೆ ಗುಡ್ ನ್ಯೂಸ್ ನೀಡಿದ್ದು, ವೇತನ ಪಾವತಿಗೆ ಅನುದಾನ ಬಿಡುಗಡೆ ಮಾಡಿದೆ.
ವಿವಿಧ ತಾಲ್ಲೂಕು ಪಂಚಾಯತಿಗಳ ಹಾಗೂ ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ಬಾಕಿ/ಪ್ರಸಕ್ತ ಸಾಲಿನ ವೇತನ ವೇತನೇತರ ಹೊರಗುತ್ತಿಗೆ ನೌಕರರ ವೇತನ ದಿನಗೂಲಿ ನೌಕರರ ಉಪದಾನ ಮತ್ತು ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ.
ವಿವಿಧ ತಾಲ್ಲೂಕು ಪಂಚಾಯಿತಿಗಳ ಹಾಗೂ ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ಬಾಕಿ/ಪ್ರಸಕ್ತ ಸಾಲಿನ ಬಾಕಿ/ಪ್ರಸಕ್ತ ಸಾಲಿನ ವೇತನ, ವೇತನೇತರ, ಹೊರಗುತ್ತಿಗೆ ನೌಕರರ ವೇತನ, ದಿನಗೂಲಿ ನೌಕರರ ಉಪದಾನ ಮತ್ತು ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಹೆಚ್ಚುವರಿ ಅನುದಾನವನ್ನು ಪ್ರಧಾನ ಲೆಕ್ಕ ಶೀರ್ಷಿಕೆ 2202, 2210, 2225, 2401, 2403, 2435 ಮತ್ತು 2515ರಡಿ ಬಿಡುಗಡೆಗೊಳಿಸಲು ಪ್ರಸ್ತಾಪಿಸಿದೆ.ಪ್ರಸ್ತಾವನೆಯನ್ನು ಪರಿಶೀಲಿಸಿ, ತಾಲ್ಲೂಕು ಪಂಚಾಯತ್ ಕಾರ್ಯಕ್ರಮದಡಿ ರೂ.2819.45ಲಕ್ಷಗಳನ್ನು ಲೆಕ್ಕ ಶೀರ್ಷಿಕೆ 2515-00-197-1-10-300ರಿಂದ ಬಿಡುಗಡೆಗೊಳಿಸಲು ನಿರ್ಣಯಿಸಿ ಆದೇಶಿಸಿದೆ.
ವಿವಿಧ ಜಿಲ್ಲಾ ಪಂಚಾಯತಿಗಳ ಹಾಗೂ ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ಅಧಿಕಾರಿ/ಸಿಬ್ಬಂದಿಯವರ ಬಾಕಿ/ಪಸಕ್ತ ಸಾಲಿನ ವೇತನ, ದಿನಗೂಲಿ ನೌಕರರ ವೇತನ/ಉಪದಾನ, ಹೊರಗುತ್ತಿಗೆ ನೌಕರರ ವೇತನ ಮತ್ತು ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಪ್ರಧಾನ ಲೆಕ್ಕ F 2059, 2202, 2205, 2210, 2225, 2235, 2401, 2402, 2403, 2405, 2406, 2435, 2515, 2851 ซอ 3451ರಡಿ ಅನುದಾನವನ್ನು ಬಿಡುಗಡೆಗೊಳಿಸಲು ಪ್ರಸ್ತಾಪಿಸಲಾಗಿದೆ.