ಗದಗ: 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಢದಲ್ಲಿ ನಡೆದಿದೆ.
ಖುಷಿ (15) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮನೆಯಲ್ಲಿಯೇ ದುಪ್ಪಟ್ಟಾದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಪ್ರಾಪ್ತ ಬಾಲಕರಿಬ್ಬರ ಕಿರುಕುಳಕ್ಕೆ ಬೇಸತ್ತು ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಕುಟುಂಬದವರು ಆರೋಪಿಸಿದ್ದಾರೆ.
ಹಲವು ದಿನಗಳಿಂದ ಅಪ್ರಾಪ್ತ ಹುಡುಗರಿಬ್ಬರೂ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದರು. ಇದರಿಂದ ಮಗಳು ತೀವ್ರವಾಗಿ ಮನನೊಂದಿದ್ದಳು ಎಂದು ಕುಟುಂಬದವರು ಕಣ್ಣೀರಿಟ್ಟಿದ್ದಾರೆ. ಗಜೇಂದ್ರಗಢ ಪೊಲೀಸ್ ಠಾಣೆಯಲ್ಲಿ ಇಬ್ಬರು ಅಪ್ರಾಪ್ತ ಬಾಲಕರ ವಿರುದ್ಧ ದೂರು ದಾಖಲಾಗಿದೆ. ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.